ಪ್ರಜಾಸ್ತ್ರ ಸುದ್ದಿ
ಮುಂಬೈ(Mumbai): ಶಿವಸೇನೆ(ಉದ್ಧವ್ ಠಾಕ್ರೆ ಬಣ) ಯುವ ನಾಯಕ, ಮಾಜಿ ಸಚಿವ ಆದಿತ್ಯ ಠಾಕ್ರೆ, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕೆಂದು ಹೇಳಿದ್ದಾರೆ. ಎಂಇಎಸ್ ವಾರ್ಷಿಕ ಸಮ್ಮೇಳನ ನಡೆಸಲು ಕರ್ನಾಟಕ ಸರ್ಕಾರ ನಿರಾಕರಿಸಿದ ಹಿನ್ನಲೆಯಲ್ಲಿ ಕೇಂದ್ರಕ್ಕೆ ಈ ರೀತಿ ಮನವಿ ಸಲ್ಲಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ಖುಷಿಯಲ್ಲಿದೆ. ಆದರೆ, ಪಕ್ಕದ ಬೆಳಗಾವಿಯಲ್ಲಿ ಮರಾಠಿಗರ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದಿದ್ದಾರೆ. ಇನ್ನು ಇಂದಿನಿಂದ ಚಳಗಾಲದ ಅಧಿವೇಶನ ಬೆಳಗಾವಿಯ ಸುವರ್ಣಸೌಧದಲ್ಲಿ ಶುರುವಾಗಿದೆ. ಡಿಸೆಂಬರ್ 20ರ ತನಕ ಅಧಿವೇಶನ ನಡೆಯಲಿದೆ. ಇಂದು ಎಂಇಸಿ ಕಾರ್ಯಕರ್ತರು ಸಂಭಾಜಿ ವತ್ತದ ಬಳಿ ಪ್ರತಿಭಟನೆಗೆ ಮುಂದಾಗಿದ್ದರು, ಎಲ್ಲರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.