ಪ್ರಜಾಸ್ತ್ರ ಸುದ್ದಿ
ಅಫಜಲಪುರ(Afzalpur): ತಾಲೂಕಿನ ಗೊಬ್ಬುರ (ಬಿ) ಗ್ರಾಮದ ಬಳಿ ಸಾರಿಗೆ ಬಸ್ ಹಾಗೂ ಟ್ಯಾಂಕರ್ ನಡುವೆ ಕಳೆದ ರಾತ್ರಿ ಅಪಘಾತ ಸಂಭವಿಸಿದೆ. ಬಸ್ ಸಿಬ್ಬಂದಿ ಹಾಗೂ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾರಿಗೂ ಏನೂ ಆಗಿಲ್ಲ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ದೇವಲ ಗಾಣಗಾಪುರ ಪೊಲೀಸ್ ಠಾಣೆಯ ಪಿಎಸ್ಐ, ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಎಂ.ವೈ ಪಾಟೀಲ, ಅಫಜಲಪುರ ಘಟಕದ ವ್ಯವಸ್ಥಾಪಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಟ್ಯಾಂಕರ್ ವಾಹನದ ಚಾಲಕ ತಪ್ಪಿನಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.




