ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದಿಢೀರ್ ರಾಜೀನಾಮೆ ಘೋಷಣೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಜೈಲಿಗೆ ಹೋಗಿದ್ದಾಗಲೂ ರಾಜೀನಾಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್(Arvind Kejriwal) ಜಾಮೀನು ಪಡೆದು ಹೊರ ಬಂದ ಮೇಲೆ ರಾಜೀನಾಮೆ ಘೋಷಿಸಿದ್ದಾರೆ. ಹೀಗಾಗಿ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆ ಮೂಡಿದೆ. ದೆಹಲಿ ವಿಧಾನಸಭಾ ಚುನಾವಣೆಗೆ ಇನ್ನು ಐದಾರು ತಿಂಗಳು ಉಳಿದಿದೆ. ಈ ಹೊತ್ತಿನಲ್ಲಿ ಆಪ್ ರಾಜಕೀಯ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ.
ಕೇಜ್ರಿವಾಲ್ ನಂತರ ಯಾರು ಸಿಎಂ ಎನ್ನುವ ಪ್ರಶ್ನೆ ಮೂಡಿದೆ. ಸಚಿವೆ ಅತಿಶಿ, ಕೇಜ್ರಿವಾಲ್ ಪತ್ನಿ ಸುನಿತಾ ಸೇರಿ ಕೆಲವರು ಹೆಸರುಗಳು ಚರ್ಚೆಯಲ್ಲಿವೆ. ಪ್ರಾಮಾಣಿಕತೆಗೆ ಕೇಜ್ರಿವಾಲ್ ಉದಾಹರಣೆ. ಕಳೆದ 2 ವರ್ಷಗಳಿಂದ ಬಿಜೆಪಿ ಸರ್ಕಾರದ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಭ್ರಷ್ಟಾಚಾರದ ಸಾಕ್ಷಿಗಳನ್ನು ನೀಡಲಿಲ್ಲ. ಹೀಗಾಗಿ ಬಿಜೆಪಿ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿಗೆ ಒಂದೂ ಸ್ಥಾನವನ್ನು ಜನರು ನೀಡುವುದಿಲ್ಲ ಎಂದು ತಿಳಿದಿದೆ ಎಂದು ಸಚಿವೆ ಅತಿಶಿ ಹೇಳಿದ್ದಾರೆ.