ಪ್ರಜಾಸ್ತ್ರ ಸುದ್ದಿ
ಚೆನ್ನೈ(Chennai): ತಮಿಳು ಸ್ಟಾರ್ ನಟ, ಟಿವಿಕೆ ಪಕ್ಷದ ಸಂಸ್ಥಾಪಕ ವಿಜಯ್ ಪತ್ನಿ ಸಂಗೀತಾ ಇತ್ತೀಚೆಗೆ ವಿಚ್ಛೇದನ ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕಾನೂನು ಪ್ರಕ್ರಿಯೆ ವೇಳೆ ಮನೆಯಿಂದ ಹೊರ ಹಾಕಬಹುದು. ಹೀಗಾಗಿ ಮನೆಯಲ್ಲಿ ಉಳಿದುಕೊಳ್ಳಲು ಅನುಮತಿ ನೀಡಬೇಕು ಎಂದು ಮನವಿ ಸಲ್ಲಿಸಿದ್ದಾರೆ.
ನನ್ನ ಪತಿ ನಟಿಯೊಬ್ಬರ ಜೊತೆಗೆ ವಿವಾಹೇತರ ಸಂಬಂಧ ಹೊಂದಿದ್ದಾರೆ. ಅಲ್ಲದೆ ನನಗೆ ನಿರಂತರವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ನಿರ್ಲಕ್ಷ್ಯಿಸುತ್ತಿದ್ದಾರೆ ಎಂದು ಪತ್ನಿ ಸಂಗೀತಾ ಆರೋಪಿಸಿದ್ದಾರೆ. ಚೆಂಗಲ್ಪಟ್ಟು ಜಿಲ್ಲೆಯ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.




