ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಕಣ್ಣಿಗೆ ಖಾರದ ಪುಡಿ ಎರಚಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ನಾಗರಹಳ್ಳಿ ರಸ್ತೆಯ ಜಮೀನುವೊಂದರಲ್ಲಿ ನಡೆದಿದೆ. ಫಾರುಕ್ ಲಾಳಸಂಗಿ(26) ಕೊಲೆಯಾದ ಯುವಕ ಎಂದು ಹೇಳಲಾಗುತ್ತಿದೆ. ಅನೈತಿಕ ಸಂಬಂಧದ ಶಂಕೆಯ ಹಿನ್ನಲೆಯಲ್ಲಿ ಹತ್ಯೆ ಮಾಡಲಾಗಿದೆ ಅನ್ನೋ ಅನುಮಾನ ಮೂಡಿದೆ.
ಯುವಕನ ಕಣ್ಣಿಗೆ ಖಾರದ ಪುಡಿ ಎರಚಿದ ದುಷ್ಕರ್ಮಿಗಳು ನಂತರ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಆಲಮೇಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ? ಯಾರು ಮಾಡಿದ್ದಾರೆ? ಅನ್ನೋದು ಸೇರಿದಂತೆ ಎಲ್ಲ ವಿಚಾರಗಳು ಪೊಲೀಸ್ ತನಿಖೆಯಿಂದ ತಿಳಿದು ಬರಲಿದೆ.