ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಹಣ್ಮಕ್ಕಳಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯನ್ನು ಕೈಬಿಡಲಾಗುತ್ತೆ ಎನ್ನುವ ಸುದ್ದಿ ಹಬ್ಬಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಎಲ್ಲ ಗ್ಯಾರೆಂಟಿಗಳು ನೂರಕ್ಕೆ ನೂರರಷ್ಟು ಮುಂದುವರೆಯುತ್ತವೆ. ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಯಾವ ಪ್ರಸ್ತಾಪವೂ ನಮ್ಮ ಮುಂದೆ ಇಲ್ಲವೆಂದರು.
ಶಕ್ತಿ ಯೋಜನೆಯನ್ನು ಮರುಪರಿಶೀಲಿಸುವ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬುಧವಾರ ಹೇಳಿದ್ದರು. ಶೇಕಡ 5ರಿಂದ 10ರಷ್ಟು ಮಹಿಳೆಯರು ನಮಗೆ ಹಣ ಕೊಟ್ಟು ಪ್ರಯಾಣಿಸುವಷ್ಟು ಆರ್ಥಿಕ ಶಕ್ತಿಯಿದೆ. ಹಣ ಕೊಟ್ಟರೆ ಕಂಡಕ್ಟರ್ ಗಳು ಪಡೆಯುತ್ತಿಲ್ಲವೆಂದು ಹೇಳುತ್ತಿದ್ದಾರೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಜೊತೆಗೆ ಸಭೆ ನಡೆಸಲಾಗುವುದು ಎಂದಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ವಿಧಾನಸೌಧದಲ್ಲಿ ಸ್ಪಷ್ಟನೆ ನೀಡಿದ್ದಾರೆ.
ವಕ್ಫ್ ಆಸ್ತಿ ವಿಚಾರ ಸಂಬಂಧ ಪ್ರತಿಭಟನೆ ನಡೆಸುತ್ತಿರುವುದು ವಿಪರ್ಯಾಸ. ಅವರ ಸರ್ಕಾರದ ಅವಧಿಯಲ್ಲಿ 200ಕ್ಕೂ ಹೆಚ್ಚು ನೋಟಿಸ್ ಕೊಟ್ಟಿದ್ದಾರೆ. ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ. ನೋಟಿಸ್ ವಾಪಸ್ ಪಡೆಯಲು ಈಗಾಗ್ಲೇ ಸೂಚಿಸಲಾಗಿದೆ. ರೈತರು ಆತಂಕ ಪಡುವ ಅಗತ್ಯವಿಲ್ಲ. ನವೆಂಬರ್ 4ರ ಅವರ ಪ್ರತಿಭಟನೆ ಉಪ ಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು ಎಂದು ವಿಧಾನಸೌಧದಲ್ಲಿ ಮಾಧ್ಯಮದವರು ಎದುರು ಹೇಳಿದರು.