ಪ್ರಜಾಸ್ತ್ರ ಸುದ್ದಿ
ತುಮಕೂರು(Tumakoru): ಬುಧವಾರ ನಸುಕಿನ ಜಾವ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಮಾಕಳಿ ಹತ್ತಿರ ಈರುಳ್ಳಿ ತುಂಬಿದ ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ನಡೆದಿದೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಸೋಲಾಪುರದಿಂದ ಬೆಂಗಳೂರಿಗೆ ಈರುಳ್ಳಿ ತುಂಬಿಕೊಂಡು ಹೊರಟಿದ್ದ ಲಾರಿ ಮುಂದಿನ ಆಟೋ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಅದನ್ನು ತಪ್ಪಿಸಿಕೊಳ್ಳಲು ಹೋಗಿ ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ನಂತರ ಲಾರಿ ಪಲ್ಟಿಯಾಗಿದೆ. ಇಂತಹ ಆಘಾತದ ನಡುವೆ ಅಮಾನವೀಯ ಘಟನೆಯೊಂದು ನಡೆದಿದೆ. ಗಾಯಗೊಂಡವರನ್ನು ರಕ್ಷಣೆ ಮಾಡುವುದನ್ನು ಬಿಟ್ಟು ಲಾರಿಯಿಂದ ಬಿದ್ದ ಈರುಳ್ಳಿ ತಗೆದುಕೊಂಡು ಹೋಗಲು ಮುಗಿಬಿದ್ದಿದ್ದರು. ಮಾದನಕನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.




