Ad imageAd image

ಕೊಳೆತ ಸ್ಥಿತಿಯಲ್ಲಿ ಅನಾಮದೇಯ ಶವ ಪತ್ತೆ

Nagesh Talawar
ಕೊಳೆತ ಸ್ಥಿತಿಯಲ್ಲಿ ಅನಾಮದೇಯ ಶವ ಪತ್ತೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ತಾಲೂಕಿನ ಯರಗಲ್ ಬಿ.ಕೆ ಗ್ರಾಮದಲ್ಲಿ ಹಾಯ್ದು ಹೋಗಿರುವ ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಅನಾಮದೇಯ(Unidentified Dead Body) ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಅಂದಾಜು 35-45 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹವಾಗಿದೆ. ಗುರುತು ಪತ್ತೆಯಾಗದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಗ್ರಾಮದ ವ್ಯಕ್ತಿಯೊಬ್ಬರು ಇದನ್ನು ನೋಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಹೋದ ಪೊಲೀಸರು ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತದೇಹದ ಮೇಲೆ ನೀಲಿ ಗೆರೆಗಳಿರುವ ಉದ್ದು ತೋಳಿನ ಅಂಗಿ, ಚಾಕ್ಲೇಟ್ ಬಣ್ಣದ ಹಾಫ್ ಬನಿಯನ್, ಕಡು ನೀಲಿ ಬಣ್ಣದ ಪ್ಯಾಂಟ್ ಇದೆ. ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ಗುರುತು, ವಿಳಾಸ ತಿಳಿದು ಬಂದಿಲ್ಲ ಎಂದು ಹೇಳಲಾಗಿದೆ. ಜನವರಿ 16, 2025ರಿಂದ ಜನವರಿ 22, 2025ರ ನಡುವೆ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಸಾವಿನಲ್ಲಿ ಸಂಶಯವಿದೆ ಎಂದು ದಾಖಲಾದ ದೂರಿನಲ್ಲಿ ಹೇಳಲಾಗಿದೆ.

WhatsApp Group Join Now
Telegram Group Join Now
Share This Article