ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಿದ್ದಾರೆ ಎಂದು ತಿಳಿದ ಬಿಜೆಪಿ ಕಾರ್ಯಕರ್ತರು ಅವರನ್ನು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ಮುಡಾ(MUDA Case) ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ವಿಷ್ಣುವರ್ಧನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಿಂದ ಪ್ರತಿಭಟನಾ(Protest) ಮೆರವಣಿಗೆ ನಡೆಸಲಾಯಿತು.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಜಿಲ್ಲಾ ಪಂಚಾಯ್ತಿ ಸಭಾಂಗಣದ ಕಡೆಗೆ ಬಿಜೆಪಿ(BJP Workers) ಕಾರ್ಯಕರ್ತರು ಹೊರಟಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆದರು. ಆಗ ಜಟಾಪಟಿ ನಡೆಯಿತು. ಇದರಿಂದಾಗಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಯಿತು. 14 ಸೈಟುಗಳನ್ನು ದಲಿತರ ಹೆಸರಲ್ಲಿ ನುಂಗಿದರಣ್ಣ ನುಂಗಿದರು. ವಾಲ್ಮೀಕಿ ನಿಗಮದಲ್ಲಿ 180 ಕೋಟಿ ನುಂಗಿದರಣ್ಣ ನುಂಗಿದರು ಸಿದ್ರಾಮಣ್ಣ ಎಂದು ಹಾಡಿ ಧಿಕ್ಕಾರ ಕೂಗಿದರು.