ಪ್ರಜಾಸ್ತ್ರ ಸುದ್ದಿ
ಬೀದರ(Bidra): ಇವತ್ತಿನ ದಿನಗಳಲ್ಲಿ ಆನ್ಲೈನ್ ಗೇಮ್ ಚಟಕ್ಕೆ ಯುವಕರು ಬಲಿಯಾಗುತ್ತಿರುವುದು ಹೆಚ್ಚಾಗುತ್ತಿದೆ. ಆನ್ಲೈನ್ ಆಟದಿಂದ ಸಾಲು ಮಾಡಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದೆ. 25 ವರ್ಷದ ವಿಜಯಕುಮಾರ ಹೊಳ್ಳೆ ಎನ್ನುವ ಯುವಕ ಗುರುವಾರ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಡಿ ಫಾರ್ಮ್ ಪದವೀಧರನಾಗಿರುವ ವಿಜಯಕುಮಾರ ಆನ್ಲೈನ್ ಆಟದ ಚಟಕ್ಕೆ ಬಿದ್ದಿದ್ದ. ಇದರಿಂದ 1.50 ಲಕ್ಷ ರೂಪಾಯಿ ಸಾಲವಾಗಿದೆ. ಇದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಆತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ದೇಹದ ಬಹುತೇಕ ಭಾಗ ಸುಟ್ಟು ಹೋಗಿದೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೆಹಕರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.