ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ನಗರದ ವಿನ್ಸನ್ ಗಾರ್ಡನ್ ಹತ್ತಿರದ ಚಿನ್ನಯ್ಯಪಾಳ್ಯದ ಮನೆಯೊಂದರಲ್ಲಿ ಅನುಮಾನಸ್ಪದ ರೀತಿಯಲ್ಲಿ ಸ್ಫೋಟವೊಂದು ಸಂಭವಿಸಿದೆ. ಇದರಿಂದಾಗಿ 7 ಜನರು ಗಾಯಗೊಂಡಿದ್ದಾರೆ. ಮೂವರು ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಸ್ಫೋಟದಿಂದಾಗಿ 10ಕ್ಕೂ ಹೆಚ್ಚು ಮನೆಗಳು ಧ್ವಂಸಗೊಂಡಿದೆ.
ಸಿಲಿಂಡರ್ ಸ್ಫೋಟದಿಂದ ಈ ದುರಂತ ನಡೆದಿದೆ ಎಂದು ಶಂಕಿಸಲಾಗಿದೆ. ಆದರೆ, ನಿಜವಾದ ಕಾರಣ ಏನು ಅನ್ನೋದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ಏನು ಕಾರಣ ಅನ್ನೋದು ತಿಳಿದು ಬರಬೇಕಿದೆ.