ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ 2ನೇ ಹಂತದ ಪ್ರತಿಭಟನೆ ನಡೆಸಲಾಗುತ್ತಿದೆ. ಪಟ್ಟಣದ ತಾಲೂಕು ಆಡಳಿತ ಕಚೇರಿ ಆವರಣದಲ್ಲಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಪ್ರಾರಂಭಿಸಲಾಗಿದೆ. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ನಿರ್ದೇಶನದ ಮೇರೆಗೆ ತಾಲೂಕು ಸಂಘದ ವತಿಯಿಂದ ಮುಷ್ಕರ ನಡೆಸಲಾಗುತ್ತಿದೆ. ಇದರಲ್ಲಿ ಸಿಂದಗಿ, ಆಲಮೇಲ, ದೇವರ ಹಿಪ್ಪರಗಿ ಭಾಗದ ಸಿಬ್ಬಂದಿ ಭಾಗವಹಿಸಿದ್ದಾರೆ. ಈ ವೇಳೆ ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ದಸ್ತಗೀರ ಮುಲ್ಲಾ, ಬಿಜೆಪಿ ಮುಖಂಡ ಸಿದ್ದು ಬಳ್ಳಾ ಮುಷ್ಕರಕ್ಕೆ ಬೆಂಬಲ ಸೂಚಿಸಿ ಮಾತನಾಡಿದರು.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಕಚೇರಿ, ಟೇಬಲ್, ಕುರ್ಚಿ, ಅಲ್ಮೇರಾ, ಮೊಬೈಲ್, ಸಿಎಮ್ ಹಾಗೂ ಡೇಟಾ, ಗೂಗಲ್ ಕ್ರೋಮ್ ಬುಕ್, ಲ್ಯಾಪ್ ಟಾಪ್, ಪ್ರಿಂಟರ್, ಸ್ಕ್ಯಾನರ್ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯ ಒದಗಿಸಬೇಕು. ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಬೇಕು. ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯ ನೀಡುವುದು. ಅಂತರ್ ಜಿಲ್ಲಾ ಅಥವ ಇತರೆ ಎಲ್ಲ ಇಲಾಖೆಗಳಲ್ಲಿರುವಂತೆ ಕಂದಾಯ ಇಲಾಖೆಯಲ್ಲಿ ವರ್ಗಾವಣೆಗಾಗಿ ವಿಶೇಷ ಮಾರ್ಗಸೂಚಿ ರಚಿಸುವುದು ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ಪ್ರಾರಂಭಿಸಲಾಗಿದೆ.
ಪ್ರಜಾಸ್ತ್ರ ವೆಬ್ ಪತ್ರಿಕೆಯಲ್ಲಿ ಪ್ರಕಟವಾಗುವ ಸುದ್ದಿಗಳನ್ನು ಯಥಾವತ್ತಾಗಿ ನಕಲು ಮಾಡುತ್ತಿರುವುದು ಕಂಡು ಬರುತ್ತಿದ್ದು, ಈ ರೀತಿ ಮಾಡುವವರ ವಿರುದ್ಧ ಕಾಪಿ ರೈಟ್ ಕಾಯ್ದೆ ಅಡಿ ಮುಂದಿನ ದಿನಗಳಲ್ಲಿ ಕಾನೂನು ಕ್ರಮಕ್ಕೆ ಮುಂದಾಗಲಾಗುವುದು. – ಸಂಪಾದಕರು
ಈ ವೇಳೆ ಸಂಘದ ತಾಲೂಕಾಧ್ಯಕ್ಷ ಹೆಚ್.ಕೆ ಅಂಗಡಿ, ಬಸಯ್ಯ ಮಠ, ವಿನೋದ ಕರ್ನಾಳ, ಸಂತೋಷ ಬಿದರಕುಂದಿ, ವೈ.ಎಂ ವಾಘೇ, ಮಾರುತಿ ಸಾಳುಂಕೆ, ಪಿ.ಕೆ ಹುಡೇದ, ವಿಜಯಲಕ್ಷ್ಮಿ, ನಿಂಗಮ್ಮ ದೊಡಮನಿ ಸೇರಿದಂತೆ ಸಿಂದಗಿ ಕಂದಾಯ ಇಲಾಖೆ ವ್ಯಾಪ್ತಿಗೆ ಬರುವ ಮೂರು ತಾಲೂಕುಗಳಿಗೆ ಒಳಪಡುವ ಗ್ರಾಮಗಳ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.