ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಉಚಿತ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು ನಾನು. ಬಿಜೆಪಿ, ಜೆಡಿಎಸ್ ನವರು ಅಲ್ಲ. ಇದರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ, ಬಿಹಾರ, ಹರಿಯಾಣ, ಗುಜರಾತ್, ಮಧ್ಯಪ್ರದೇಶ ರಾಜ್ಯದಲ್ಲಿ ಈ ಯೋಜನೆ ಜಾರಿಗೆ ತಂದಿದ್ದಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಅನರ್ಹ ಬಿಪಿಎಲ್ ಕಾರ್ಡ್ ರದ್ದು ವಿಚಾರ ಸಂಬಂಧ ವೇಳೆ ಬಿಜೆಪಿ, ಜೆಡಿಎಸ್ ವಿರುದ್ಧ ಈ ರೀತಿ ವಾಗ್ದಾಳಿ ನಡೆಸಿದರು.
ನಾವು ಕೇಂದ್ರಕ್ಕೆ 4.50 ಲಕ್ಷ ಕೋಟಿ ತೆರಿಗೆಯನ್ನು ಕಟ್ಟುತ್ತೇವೆ. ವಾಪಸ್ ಬರುವುದು ಕೇವಲ 59 ಸಾವಿರ ಕೋಟಿ ಮಾತ್ರ. ಉಳಿದ ಹಣ ಕೇಂದ್ರದಲ್ಲಿಯೇ ಉಳಿಯುತ್ತಿದೆ. ಇದರ ಬಗ್ಗೆ ಕುಮಾರಸ್ವಾಮಿ ಮಾತನಾಡಿ ರಾಜ್ಯಕ್ಕೆ ಕೊಡಿಸಲಿ. ದೇವೇಗೌಡರು, ಕುಮಾರಸ್ವಾಮಿ ಕರ್ನಾಟಕಕ್ಕೆ ಅನ್ಯಾಯವಾದಾಗ ಮಾತನಾಡಿದ್ದಾರೆಯೇ ಅಂತಾ ಪ್ರಶ್ನಿಸಿದರು. ನಬಾರ್ಡ್ ನಿಂದ ಕಳೆದ ವರ್ಷ 5,600 ಕೋಟಿ ಸಾಲವನ್ನು ರಾಜ್ಯಕ್ಕೆ ನೀಡಲಾಗಿತ್ತು. ಈ ಬಾರಿ 2,340 ಕೋಟಿ ನೀಡಲಾಗಿದೆ. ಶೇಕಡ 58ರಷ್ಟು ಕಡಿಮೆ ಮಾಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವರಾದ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಏನು ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.