ಅನ್ನದಾನೇಶ್ವರ ಮಠದ ಸ್ವಾಮೀಜಿ ಭೀಕರ ಹತ್ಯೆ

214

ಪ್ರಜಾಸ್ತ್ರ ಅಪರಾಧ ಸುದ್ದಿ

ಮೈಸೂರು: ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿಯನ್ನು(90) ಭೀಕರವಾಗಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಸೋಮವಾರ ಕೊಲೆ ಮಾಡಲಾಗಿದೆ. ಈ ಸಂಬಂಧ ರವಿ(60) ಎಂಬಾತನನ್ನು ಬಂಧಿಸಲಾಗಿದೆ.

ಸಿದ್ಧಾರ್ಥನಗರದ ಸಮೀಪದ ಬನ್ನೂರು ರಸ್ತೆಯಲ್ಲಿ ಮಠವಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಸ್ತಿ ವಿಚಾರಕ್ಕೆ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ. ಆರೋಪಿ ರವಿ ಸ್ವಾಮೀಜಿ ಹತ್ತಿರ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
error: Content is protected !!