ಪ್ರಜಾಸ್ತ್ರ ಸುದ್ದಿ
ಕೋಯಿಕ್ಕೋಡ್(Kozhikode): ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕ ಮೂಡಿಸುವ ಸೋಂಕಿನ ಪ್ರಕರಣ ಪತ್ತೆಯಾಗುತ್ತಿದ್ದು, ಮೆದುಳು ತಿನ್ನುವ ಅಮೀಬಾ ಸೋಂಕಿನ ಮತ್ತೊಂದು ಪ್ರಕರಣ ಕೇರಳದಲ್ಲಿ ಪತ್ತೆಯಾಗಿದೆ. ಉತ್ತರ ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ 43 ವರ್ಷದ ಮಹಿಳೆಯಲ್ಲಿ ಈ ಸೋಂಕು ಪತ್ತೆಯಾಗಿದೆ. ಇದನ್ನು ಅಮೀಬಿಕ್ ಮೆನಿಂಗೊಎನ್ಸೆಫಲಿಟಿಸ್ ಎಂದು ಕರೆಯಲಾಗುತ್ತೆ.
ಇದೊಂದು ಅಪರೂಪದ ಕಾಯಿಲೆಯಾಗಿದೆ. ಇಂತಹ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಸೋಂಕಿತರೆಲ್ಲ ಕೋಯಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ನಾಲ್ವರು ಮಕ್ಕಳಿದ್ದಾರೆ. 9 ವರ್ಷದ ಬಾಲಕಿಯೊಬ್ಬಳು ಈ ತಿಂಗಳ ಮೊದಲ ವಾರದಲ್ಲಿ ಮೃತಪಟ್ಟಿದ್ದಾಳೆ.