ಪ್ರಜಾಸ್ತ್ರ ಸುದ್ದಿ
ರಾಂಚಿ(Ranchi): ಬೆಳ್ಳಂಬೆಳಗ್ಗೆ ಮತ್ತೊಂದು ರೈಲು ಅಪಘಾತ ಸಂಭವಿಸಿದೆ. ಹೌರಾ-ಮುಂಬೈ ಎಕ್ಸ್ ಪ್ರೆಸ್ (Howara Mumbai express) ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 10 ಜನರು ಗಾಯಗೊಂಡಿದ್ದಾರೆ. ಜಾರ್ಖಂಡ್ ನ ಚಕ್ರಧರಪುರದಲ್ಲಿ ಮಂಗಳವಾರ ನಸುಕಿನ ಜಾವ ಸುಮಾರು 4.45ರ ಸುಮಾರಿಗೆ ನಡೆದಿದೆ. ರೈಲಿನ 5 ಬೋಗಿಗಳು ಹಳಿ ತಪ್ಪಿವೆ. ರಕ್ಷಣಾ ಕಾರ್ಯಾ ನಡೆದಿದೆ.
ಪೊಲೀಸರು, ರಕ್ಷಣಾ ತಂಡ, ರೈಲ್ವೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಪಘಾತದ ಬಗ್ಗೆ ರೈಲ್ವೆ ವಿಭಾಗದ ಹಿರಿಯ ಅಧಿಕಾರಿ ಆದಿತ್ಯಕುಮಾರ್ ಚೌಧರಿ ಖಚಿತಪಡಿಸಿದ್ದಾರೆ. ಗಾಯಾಳುಗಳನ್ನು ಚಕ್ರಧರಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೆರೆಕೇಲಾ ಜಿಲ್ಲಾಧಿಕಾರಿ ಕೂಡಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ದೇಶದಲ್ಲಿ ಒಂದಾದ ಮೇಲೆ ಒಂದರಂತೆ ರೈಲು ಅಪಘಾತಗಳು ಸಂಭವಿಸುತ್ತಲೇ ಇವೆ. ಆದರೂ ಸಹ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್(ashwini vaishnaw) ಇದರ ಹೊಣೆ ಹೊತ್ತು ರಾಜೀನಾಮೆ ನೀಡದೆ ಇರುವುದಕ್ಕೆ ಸಾರ್ವಜನಿಕರೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಳೆದ ವರ್ಷದಿಂದಲೇ ಸರಣಿ ರೈಲು ಅಪಘಾತಗಳು ನಡೆಯುತ್ತಿವೆ. ಈ ಬಾರಿಯೂ ಅವರನ್ನೇ ರೈಲ್ವೆ ಮಂತ್ರಿಯನ್ನಾಗಿ ಅವಕಾಶ ನೀಡಲಾಗಿದೆ. ಈ ಹಿಂದೆ ಲಾಲ್ ಬಹದ್ದೂರ್ ಶಾಸ್ತ್ರಿಯವರು ರೈಲ್ವೆ ಸಚಿವರಾಗಿದ್ದ ನಡೆದ ಒಂದು ರೈಲು ಅಪಘಾತದಿಂದಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿದ್ದರು. ಈ ರೀತಿಯ ಜವಾಬ್ದಾರಿಯ ನಾಯಕರು ಬೇಕಾಗಿದ್ದಾರೆ ಎಂದು ಜನರು ಹೇಳುತ್ತಿದ್ದಾರೆ