ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆ ಸಂಬಂಧ ಗುರುವಾರ ಬಿಜೆಪಿಯಿಂದ ಮತ್ತೊಂದು ಪಟ್ಟಿ ಬಿಡುಗಡೆಯಾಗಿದೆ. 9 ಅಭ್ಯರ್ಥಿಗಳಿರುವ ಮತ್ತೊಂದು ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ. ಇದರೊಂದಿಗೆ 68 ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಸ್ಪರ್ಧಿಗಳ ಹೆಸರನ್ನು ಬಹಿರಂಗಗೊಳಿಸಿದೆ.
70 ಕ್ಷೇತ್ರಗಳನ್ನು ಹೊಂದಿರುವ ದೆಹಲಿಯಲ್ಲಿ 2 ಕ್ಷೇತ್ರಗಳಲ್ಲಿ ಮಾತ್ರ ಮೈತ್ರಿ ಪಕ್ಷಕ್ಕೆ ಬಿಟ್ಟುಕೊಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಫೆಬ್ರವರಿ 5ರಂದು ಮೊದಲ ಹಂತ ಹಾಗೂ ಫೆಬ್ರವರಿ 8ರಂದು 2ನೇ ಹಂತದ ಚುನಾವಣೆ ನಡೆಯಲಿದೆ. ಇಲ್ಲಿ ಆಡಳಿತರೂಢ ಆಪ್, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಫೈಟ್ ನಡೆಯಲಿದೆ.