ಪ್ರಜಾಸ್ತ್ರ ಸುದ್ದಿ
ಮಂಡ್ಯ(Mandaya): ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ನಿಂದಾಗಿ ಮತ್ತೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಒಳಗೆರೆ ಮೆಣಸ ಗ್ರಾಮದಲ್ಲಿ ನಡೆದಿದೆ. ನವೀನ್(35) ಎನ್ನುವ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಫೈನಾನ್ಸ್ ವಸೂಲಿಗಾರರ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ವಿವಿಧ ಮೈಕ್ರೋ ಫೈನಾನ್ಸ್ ಕಂಪನಿ ಹಾಗೂ ಕೈಗಡವಾಗಿಯೂ ಸಾಲ ಮಾಡಿಕೊಂಡಿದ್ದನಂತೆ. ಸಾಲ ವಸೂಲಾತಿ ಸಂಬಂಧ ಫೈನಾನ್ಸ್ ಕಂಪನಿಯವರ ಕಿರುಕುಳದಿಂದ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದನಂತೆ. ಆದರೆ, ಪೊಲೀಸನವರು ಯಾವುದೇ ಕ್ರಮ ತೆಗೆದುಕೊಳ್ಳದ ಪರಿಣಾಮ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆರೋಪಿಸಲಾಗಿದೆ.