ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರವಷ್ಟೇ ಬೆಳಕಿಗೆ ಬಂದಿದೆ. ಅಷ್ಟರಲ್ಲಿ ಮತ್ತೊಂದು ದುರಂತ ನಡೆದಿದೆ. ವಿಜಯನಗರದ ಮೈದಾನದಲ್ಲಿ ಪುರುಷ ಹಾಗೂ ಮಹಿಳೆ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿವೆ. ಇದು ಆತ್ಮಹತ್ಯೆನಾ ಅಥವ ಬೇರೆ ಏನಾದರೂ ಇದೆಯಾ ಎನ್ನುವ ಶಂಕೆ ವ್ಯಕ್ತವಾಗಿದೆ.
ಒಂದು ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ನಡೆದಿದೆ. ಇವರಿಬ್ಬರ ಗುರುತು ಪತ್ತೆಯಾಗಿಲ್ಲ. ಯಾರು ಇವರು, ಮೈದಾನದಲ್ಲಿ ಬಂದು ಆತ್ಮಹತ್ಯೆ ಮಾಡಿಕೊಂಡರಾ? ಯಾರಾದರೂ ಹತ್ಯೆ ಮಾಡಿ ಈ ರೀತಿ ಏನಾದರೂ ಮಾಡಿದ್ದರಾ ಏನು ಅನ್ನೋದು ಸೇರಿದಂತೆ ಸಾಕಷ್ಟು ಅನುಮಾನಗಳು ಮೂಡಿವೆ. ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಪೊಲೀಸರ ತನಿಖೆಯಿಂದ ಸತ್ಯ ತಿಳಿದು ಬರಬೇಕಿದೆ.