ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಅತ್ಯಾಚಾರ ಪ್ರಕರಣ ಸಂಬಂಧ ಮಲಯಾಳಂ ನಟನಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರೀಕ್ಷಣಾ ಜಾಮೀನು ನೀಡಿದೆ. ಹಿರಿಯ ನಟ ಸಿದ್ದೀಕ್ ವಿರುದ್ಧ ನಟಿಯೊಬ್ಬರು ಅತ್ಯಾಚಾರದ ದೂರು ದಾಖಲಿಸಿದ್ದಾರೆ. 2016ರಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಈ ಸಂಬಂಧ ಎಫ್ಐಆರ್ ಸಹ ದಾಖಲಾಗಿದೆ.
ಇದೀಗ ನಟ ಸಿದ್ದೀಕ್ ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಪಾಸ್ ಪೋರ್ಟ್ ಅನ್ನು ಪೊಲೀಸ್ ಅಧಿಕಾರಿಗಳಿಗೆ ಒಪ್ಪಿಸಬೇಕು. ತನಿಖೆಗೆ ಸಹಕರಿಸಬೇಕು ಎಂದು ಕೋರ್ಟ್ ಸೂಚಿಸಿದೆ. ಕೇರಳದಲ್ಲಿ ನಿವೃತ್ತ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಬಹಿರಂಗಗೊಂಡ ಬಳಿಕ ದಾಖಲಾದ 2ನೇ ಎಫ್ಐಆರ್ ಇದಾಗಿದೆ.