ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನಗೆ 6 ವಾರಗಳ ಮಧ್ಯಂತರ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್ ಈಗಾಗ್ಲೇ ಆದೇಶಿಸಿದೆ. ಕಳೆದ ಎರಡು ವಾರಗಳಿಂದ ಹೊರಗೆ ಇರುವ ನಟ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಮಧ್ಯಮಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲು ತನಿಖಾಧಿಕಾರಿಗಳು ಮುಂದಾಗಿದ್ದು, ಇದಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಈ ಕುರಿತು ಶುಕ್ರವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆ ಒಪ್ಪಿಗೆ ಸೂಚಿಸಿದೆ. ಶೀಘ್ರದಲ್ಲಿ ಮನವಿ ಸಲ್ಲಿಸಲಾಗುವುದು ಎಂದಿದ್ದಾರೆ. ಬೆನ್ನು ನೋವಿಗೆ ಸಧ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ನಟ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ.