ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಮೈಸೂರು ದಸರಾ ಉದ್ಘಾಟಕರಾಗಿ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಇದನ್ನು ಪ್ರಶ್ನಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ವಜಾಗೊಳಿಸಾಯಿತು. ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಇದನ್ನು ಶುಕ್ರವಾರ ವಜಾಗೊಳಿಸಲಾಗಿದೆ.
ಕರ್ನಾಟಕ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿದಾರ ಪರ ವಕೀಲರಾದ ಬಿ.ಪಿ ಸುರೇಶ್ ವಾದ ಮಾಡಿದರು. ಹಿಂದುಯೇತರರು ಪೂಜೆ ಮಾಡುವಂತಿಲ್ಲ ಎಂದು ವಾದಿಸಿದರು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಅವರಿದ್ದ ಪೀಠ ಅರ್ಜಿಯನ್ನು ವಜಾಗೊಳಿಸಿದರು.