ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ

108

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ವಿಜಯಪುರ: ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 15 ವರ್ಷಗಳಿಂದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗಶಿಕ್ಷಕಣವನ್ನು ನೀಡುವ ಸಂಸ್ಥೆಯಾಗಿರುತ್ತದೆ. ಪ್ರತಿ ವರ್ಷದಂತೆ 2024-25ನೇ ಸಾಲಿಗೆ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮಾ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಂಗತರಬೇತಿ ಪಡೆಯುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಸಲು 18 ರಿಂದ 28 ವರ್ಷಗಳು ತುಂಬಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮತ್ತು ವಿದ್ಯಾರ್ಥಿ ವೇತನ ನೀಡಲಾಗುವುದು.

ಆಸಕ್ಕಿವುಳ್ಳ ವಿದ್ಯಾರ್ಥಿಗಳು ವೆಬ್ ಸೈಟ್ http://rangayanamysore.karnataka.gov.in ನಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಜೂನ್20ರ ಸಂಜೆ 5.30ರೊಳಗೆ ಅಂಚೆಯ ಮೂಲಕ ಅಥವಾ ಉಪನಿರ್ದೇಶಕರ ಕಚೇರಿ ರಂಗಾಯಣ ಮೈಸೂರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2512639, 9148827720ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಲಾಗಿದೆ.




error: Content is protected !!