ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ(Loan) ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 10, 2024 ಆಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ, ವಿವೇಕ ನಗರ ಪಶ್ಚಿಮ, ಬಿಡಿಎ ಕಾಂಪ್ಲೆಕ್ಸ್, ಬಿಡಿಎ ಕಚೇರಿ ಹಿಂಭಾಗದಲ್ಲಿರುವ ಜಿಲ್ಲಾ ವ್ಯವಸ್ಥಾಪಕರ ಕಚೇರಿ(08352-276743) ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




