ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಪ್ರೀತಿಯ ನಾಟಕವಾಡಿ ಮದುವೆಯಾಗಿ ಯುವತಿಯರಿಗೆ ವಂಚಿಸುತ್ತಿದ್ದ ಯುವಕನನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಟ್ಟೇಗಾರಪಾಳ್ಯ ನಿವಾಸಿ ಮಿಥುನ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ಈ ಹಿಂದೆಯೂ ಯುವತಿಯೊಬ್ಬಳೊಂದಿಗೆ ಮದುವೆ ಆಗಿ, ನಂತರ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದ. ಈ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 6 ತಿಂಗಳು ಜೈಲು ಶಿಕ್ಷೆ ಅನುಭವಿಸಿದ್ದ.
ಹೀಗೆ ಯುವತಿಯರೊಂದಿಗೆ ಪ್ರೀತಿ, ಮದುವೆ ಎಂದು ನಾಟವಾಡುತ್ತಿದ್ದ. ಐದಾರು ತಿಂಗಳು ಸಂಸಾರ ಮಾಡುತ್ತಿದ್ದ. ನಂತರ ಅವರ ಹತ್ತಿರವಿದ್ದ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ. ಇಂತಹದ್ದೆ ಪ್ರಕರಣದಲ್ಲಿ ಇದೀಗ ಬಂಧಿತನಾಗಿದ್ದಾನೆ. ವಂಚನೆಯನ್ನೇ ಜೀವನ ಮಾಡಿಕೊಂಡಿರುವ ಮಿಥುನ್ ಕುಮಾರ್ ರೀತಿಯವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಗಿದೆ.