ಪ್ರಜಾಸ್ತ್ರ ಸುದ್ದಿ
ಕೋಲಾರ(Kolara): ಕೊಲೆ ಬೆದರಿಕೆ, ಜಾತಿ ನಿಂದನೆ, ಲಂಚ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಶಾಸಕ ಮುನಿರತ್ನ(Munirathna) ವಿರುದ್ಧ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿವೆ. ಶಾಸಕ ಮುನಿರತ್ನ ಆಡಿಯೋ ವೈರಲ್ ಆಗಿದೆ. ಅತ್ತ ಗುತ್ತಿಗೆದಾರ ಚಲುವರಾಜ ಸಿಎಂ ಭೇಟಿಯಾಗಿ ನ್ಯಾಯಕ್ಕಾಗಿ ಮನವಿ ಸಲ್ಲಿದ್ದಾರೆ. ಇದೆಲ್ಲದರ ಬೆಳವಣಿಗೆಯಿಂದಾಗಿ ಆಂಧ್ರಕ್ಕೆ ಪರಾರಿಯಾಗುತ್ತಿದ್ದ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಶಾಸಕ ಮುನಿರತ್ನ ಕಾರು ಬೆನ್ನು ಹತ್ತಿದ ಪೊಲೀಸರು ಕೋಲಾರ ಗಡಿ ಭಾಗದಲ್ಲಿ ವಶಕ್ಕೆ ಪಡೆಯಲಾಗಿದೆ. ಮೊಬೈಲ್ ಟವರ್ ಲೋಕೇಷನ್ ಮೂಲಕ ಆಂಧ್ರಕ್ಕೆ ಎಸ್ಕೇಪ್ ಆಗುತ್ತಿದ್ದ ಇವರನ್ನು ಕೋಲಾರ ಗ್ರಾಮಾಂತರ ಠಾಣೆಯ ಪೊಲೀಸರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ಮುಳಬಾಗಿಲು ತಾಲೂಕಿನ ನಂಗಲಿ ಬಳಿ(Arrest) ಬಂಧಿಸಿದ್ದಾರೆ. ಆಂಧ್ರದ ಚಿತ್ತೂರಿಗೆ ಪರಾರಿಯಾಗುತ್ತಿದ್ದರು ಎಂದು ಹೇಳಲಾಗುತ್ತಿದೆ. ಸಧ್ಯ ಇವರನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿದೆ.