Ad imageAd image

ಹಸುಗಳ ಕೆಚ್ಚಲು ಕೊಯ್ದ ನೀಚರ ಬಂಧನ

Nagesh Talawar
ಹಸುಗಳ ಕೆಚ್ಚಲು ಕೊಯ್ದ ನೀಚರ ಬಂಧನ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮರೆದಿದ್ದ ನೀಚರನ್ನು ಕಾಟನ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆದರೆ, ಆರೋಪಿಗಳ ಹೆಸರುಗಳನ್ನು ಬಹಿರಂಗಪಡಿಸಿಲ್ಲ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಚಾಮರಾಜಪೇಟೆಯ ವಿನಾಯಕನಗರದಲ್ಲಿ ಮಲಗಿದ್ದ 3 ಹಸುಗಳು ಕೆಚ್ಚಲು ಕೊಯ್ದು ಪರಾರಿಯಾಗಿದ್ದರು. ಇದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ.

ಸಾರ್ವಜನಿಕರು, ವಿಪಕ್ಷಗಳ ನಾಯಕರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ ಉಗ್ರ ಹೋರಾಟ ಮಾಡುವುದಾಗಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬಂಧಿತರವಿಂದ ಪ್ರಾಣಿಗಳ ಹಿಂಸಾಚಾರ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Share This Article