ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಗಾಂಧಿ ನಗರದ ಸ್ಟಾರ್ ಚೌಕ್ ಹತ್ತಿರ ಇರುವ ಇಟ್ಟಿಗೆ ಭಟ್ಟಿಯಲ್ಲಿ ಮೂವರು ಕಾರ್ಮಿಕರ ಮೇಲೆ ಕಳೆದ ಮೂರು ದಿನಗಳಿಂದ ಕೂಡಿ ಹಾಕಿ ಹಲ್ಲೆ ಮಾಡಿದ ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಮೂವರು ತಪ್ಪಿಸಿಕೊಂಡಿದ್ದಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಇಟ್ಟಿಗೆ ಭಟ್ಟಿ ಮಾಲೀಕು ಖೇಮು ರಾಠೋಡ ಸೇರಿ ಇಬ್ಬರ ಬಂಧನವಾಗಿದೆ. ಉಳಿದವರ ಬಂಧನಕ್ಕೆ ಶೋಧ ಕಾರ್ಯ ನಡೆದಿದೆ.
ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದ ಸದಾಶಿವ ಬಸಪ್ಪ ಮಾದರ, ಉಮೇಶ ಬಾಳಪ್ಪ ಮಾದರ ಹಾಗೂ ಸದಾಶಿವ ಚಂದ್ರಪ್ಪ ಬಬಲಾದಿ ಎಂಬುವರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ, ಆತನ ಮಗ ಸೇರಿದಂತೆ ಹಲವರು ದಾರುಣವಾಗಿ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂಕ್ರಾಂತಿ ಹಬ್ಬಕ್ಕೆ ಇವರು ಊರಿಗೆ ಹೋಗಿದ್ದರು. ಅಡ್ವಾನ್ಸ್ ಹಣ ಪಡೆದು ತಡವಾಗಿ ಬಂದಿದ್ದಾರೆ ಎಂದು ಈ ರೀತಿ ಹಲ್ಲೆ ಮಾಡಿದ್ದಾರೆ. ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.