ಪ್ರಜಾಸ್ತ್ರ ಸುದ್ದಿ
ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್(Arvind Kejriwal) ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸಿಬಿಐಯಿಂದ ತಮ್ಮ ಬಂಧನ ಹಾಗೂ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಉಜ್ವಲ್ ಭುಯಾನ್ ಅವರಿದ್ದ ಪೀಠ ಜಾಮೀನು(Bail) ನೀಡಿ ಆದೇಶಿಸಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಸಿಬಿಐ ಜೂನ್ 26ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಜುಲೈ 12ರಂದು ಇಡಿ ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದರೂ ಸಿಬಿಐ ಬಂಧನದಿಂದ ಅವರಿಗೆ ಜಾಮೀನು ಸಿಕ್ಕಿರಲಿಲ್ಲ. ಹೀಗಾಗಿ ತಿಹಾರ್ ಜೈಲಿನಲ್ಲಿದ್ದಾರೆ. ಈಗ ಜಾಮೀನು ಮಂಜೂರು ಆಗಿದ್ದು ಯಾವಾಗ ಬಿಡುಗಡೆಯಾಗುತ್ತಾರೆ ಕಾದು ನೋಡಬೇಕು.