ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ನೀಡುವ ಸಂದರ್ಭದಲ್ಲಿ ಜಯನಗರ ಕ್ಷೇತ್ರವನ್ನು ಹೊರಗಿಟ್ಟಿರುವ ಸಂಬಂಧ ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್(DK Shivakumar) ಆಡಿರುವ ಮಾತಿಗೆ ವಿಪಕ್ಷ ನಾಯಕ ಆರ್.ಅಶೋಕ್(R.Ashoka) ಕಿಡಿ ಕಾರಿದ್ದಾರೆ. ನಿಮ್ಮ ಬಳಿ ತಗ್ಗಿ ಬಗ್ಗಿ ಇರಬೇಕು ಅನ್ನೋದಕ್ಕೆ ಬೆಂಗಳೂರು ನಗರವನ್ನು ನಿಮ್ಮ ಜಹಗೀರು ಅಂದುಕೊಂಡಿದ್ದೀರಾ? ಅಧಿಕಾರ ಎನ್ನುವುದು ಮತದಾರ ಕೊಟ್ಟಿರುವ ಭಿಕ್ಷೆ, ಸಂವಿಧಾನ ಕೊಟ್ಟಿರುವ ಜವಾಬ್ದಾರಿಯೇ ಹೊರತು ಪಾಳೆಗಾರಿಕೆ ಅಲ್ಲ ಎಂದು ಎಕ್ಸ್ ಖಾತೆಯ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ನಾವು ತಗ್ಗಿ ಬಗ್ಗಿ ನಡೆಯಬೇಕಿರುವುದು ಮತಭಿಕ್ಷೆ ನೀಡಿರುವ ಪತದಾರ ಪ್ರಭುಗಳಿಗೆ, ಪ್ರಜಾಪ್ರಭುತ್ವ ವ್ಯವಸ್ಥೆ ನೀಡಿರುವ ಸಂವಿಧಾನಕ್ಕೆ ಹೊರತು ಯಾವ ದೊಣ್ಣೆ ನಾಯಕನಿಗೂ ಅಲ್ಲ. ಈ ನಿಮ್ಮ ಒಣ ಪ್ರತಿಷ್ಠೆ, ಧಿಮಾಕು, ದರ್ಬಾರು ಎಲ್ಲ ಬಿಟ್ಟು ಜನರ ಸೇವೆ ಮಾಡುವ ಮನೋಭಾವ ಬೆಳಸಿಕೊಳ್ಳಿ. ಯಾವುದೇ ಕ್ಷೇತ್ರದ ಬಗ್ಗೆ ತಾರತಮ್ಯ ಮಡದೆ ಸಚಿವರಾಗಿ ನಿಮ್ಮ ಕರ್ತವ್ಯ ನಿರ್ವಹಿಸಿ ಎಂದು ಹೇಳಿದ್ದಾರೆ.