ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಏಷ್ಯ ಕಪ್-2025 ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಯುವ ಆಟಗಾರರನ್ನು ಒಳಗೊಂಡ ತಂಡ ಸಿದ್ಧವಾಗಿದೆ. ಆದರೆ, ಚುಟುಕು ಕ್ರಿಕೆಟ್ ಟೂರ್ನಿಯಲ್ಲಿ ರನ್ ಮಷಿನ್ ವಿರಾಟ್ ಕೊಹ್ಲಿ, ಹಿಟ್ ಮ್ಯಾನ್ ರೋಹಿತ್ ಶರ್ಮಾ ಸೇರಿದಂತೆ ಅನೇಕ ಆಟಗಾರರು ಇಲ್ಲ. ಈ ಸ್ಟಾರ್ ಆಟಗಾರರು ಇಲ್ಲದ ತಂಡ ಕಣಕ್ಕೆ ಇಳಿಯುತ್ತಿದೆ. ಯಾಕಂದ್ರೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಅವರು ಟಿ-20 ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.
ಇನ್ನು 2023ರಿಂದ ಯಜ್ವೇಂದ್ರ ಚಹಲ್ ಟೀಂ ಇಂಡಿಯಾ ಪರ ಒಂದೇ ಒಂದು ಪಂದ್ಯ ಆಡಿಲ್ಲ. 2024ರ ಟಿ-20 ವಿಶ್ವಕಪ್ ನಲ್ಲಿ ಸ್ಥಾನ ಪಡೆದಿದ್ದರೂ, ಕಣಕ್ಕೆ ಇಳದಿರಲಿಲ್ಲ. ಈಗ ಏಷ್ಯ ಕಪ್ ನಲ್ಲೂ ಸ್ಥಾನ ಸಿಕ್ಕಿಲ್ಲ. ಇಂಗ್ಲೆಂಡ್ ಟೆಸ್ಟ್ ಸರಣಿಯ ವೇಳೆ ಗಾಯಗೊಂಡಿರುವ ರಿಷಬ್ ಪಂತ್ ಅವರನ್ನು ಕೈ ಬಿಡಲಾಗಿದೆ. ಇದೆ ರೀತಿ ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅದ್ಭುತ್ ಪ್ರದರ್ಶನ ನೀಡಿದ ಮೊಹಮ್ಮದ್ ಸಿರಾಜ್ ಗೆ ವಿಶ್ರಾಂತಿ ನೀಡಲಾಗಿದೆ.
ಭಾರತ ತಂಡ ಈ ರೀತಿ ಇದೆ: ಸೂರ್ಯಕುಮಾರ್ ಯಾದವ್(ನಾಯಕ), ಶುಭನಂ ಗಿಲ್(ಉಪ ನಾಯಕ), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಜಿತೇಶ್ ಶರ್ಮಾ(ವಿಕೆಟ್ ಕೀಪರ್), ತಿಲಕ್ ವರ್ಮಾ, ಅಭಿಷೇಕ್ ಶರ್ಮಾ, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಷರ ಪಟೇಲ್, ಜಸ್ಪ್ರೀತ್ ಬೂಮ್ರಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ ತಂಡದಲ್ಲಿದ್ದಾರೆ.