ಪ್ರಜಾಸ್ತ್ರ ಸುದ್ದಿ
ಕೊಪ್ಪಳ(Koppala): ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ(31) ಎಂಬಾತನನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಏಳೆಂಟು ಜನರು ಬಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಮಂಗಳವಾರ ತಡರಾತ್ರಿ ಕೊಲೆ ಮಾಡಿದ್ದಾರೆ.
ಸ್ನೇಹಿತರೊಂದಿಗೆ ವೆಂಕಟೇಶ ರಾತ್ರಿ ಊಟಕ್ಕೆ ಹೊರಗೆ ಹೋಗಿದ್ದ. ವಾಪಸ್ ಬರುವಾಗ ಗುಂಪೊಂದು ಇವರ ಮೇಲೆ ದಾಳಿ ಮಾಡಿದೆ. ನಮ್ಮನ್ನು ಹೆದರಿಸಿ ಓಡಿಸಿದರು ಎಂದು ಮೃತ ವೆಂಕಟೇಶ ಸ್ನೇಹಿತ ರಾಮು ಎಂಬಾತ ಮಾಧ್ಯಮಗಳ ಮುಂದೆ ಹೇಳಿದ್ದಾನೆ. ಘಟನಾ ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ವಾನದಳ, ಬೆರಳಚ್ಚು ತಂಡ ಭೇಟಿ ನೀಡಿದೆ.