Ad imageAd image

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆತ್ಮಹತ್ಯೆ

Nagesh Talawar
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆತ್ಮಹತ್ಯೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ತುಮಕೂರು(Tumakoru): ಜಿಲ್ಲೆಯ ಪಾವಗಡ ಪಟ್ಟಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್(59) ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ತಮ್ಮ ಸಾವಿಗೆ ಜಂಟಿ ನಿರ್ದೇಶಕರಾದ ಕೃಷ್ಣಪ್ಪ ಕಾರಣವೆಂದು ಡೆತ್ ನೋಟ್  ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.

ನನ್ನ ತಾಯಿ, ಪತ್ನಿ, ಮಕ್ಕಳು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಆದರೆ, ಮೇಲಾಧಿಕಾರಿ ನೀಡಿದ ಕಿರುಕುಳದಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರಂತೆ. ಸಂಜೆ ಎಲ್ಲ ಸಿಬ್ಬಂದಿ ತೆರಳಿದ ಬಳಿಕ ಕಚೇರಿಯಲ್ಲೇ ನೇಣು ಹಾಕಿಕೊಂಡಿದ್ದಾರೆ. ಪಾವಗಡ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

WhatsApp Group Join Now
Telegram Group Join Now
Share This Article