ಪ್ರಜಾಸ್ತ್ರ ಸುದ್ದಿ
ಅಥಣಿ(Athani): ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ಅಥಣಿ ಪೊಲೀಸ್ ಠಾಣೆಯಿಂದ ಮೊಬೈಲ್ ಕಳೆದುಕೊಂಡ ವಾರಸುದಾರರಿಗೆ CEIR Portal ನಲ್ಲಿ ಪತ್ತೆಯಾದಂತಹ ಮೊಬೈಲ್ ಗಳನ್ನು ವಶಪಡಿಸಿಕೊಂಡು ವಾರಸುದಾರರಿಗೆ ಮರಳಿಸಲಾಯಿತು. ಕಾಗವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದುಕೊಂಡವರಿಗೂ ಸಹ ಪತ್ತೆಯಾದ ಮೊಬೈಲ್ ಗಳನ್ನು ವರಸುದಾರರಿಗೆ ನೀಡಲಾಯಿತು. ಸಾರ್ವಜನಿಕರು ಮೊಬೈಲ್ ಕಳೆದುಕೊಂಡರೆ ಕೂಡಲೇ ceir.gov.in ಪೋರ್ಟಲ್‌ಗೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಸಲ್ಲಿಸಿ ಎಂದು ಪೊಲೀಸರು ತಿಳಿಸಿದ್ದಾರೆ.




