ಪ್ರಜಾಸ್ತ್ರ ಸುದ್ದಿ
ಉಡುಪಿ(Udupi): ಆಡಿಯೋ ವೈರಲ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಆಗಸ್ಟ್ 12ರ ರಾತ್ರಿ ಸುಮಾರು 11.30ರ ಸಮಯದಲ್ಲಿ ಕೊಲೆ ಮಾಡಿದ ಘಟನೆ ತಾಲೂಕಿನ ಪುತ್ತೂರು ಗ್ರಾಮದ ಸುಬ್ರಮಣ್ಯನಗರದ 9ನೇ ಅಡ್ಡರಸ್ತೆಯಲ್ಲಿ ನಡೆದಿದೆ. ವಿನಯ್ ದೇವಾಡಿಗ(40) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಈ ಸಂಬಂಧ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಬ್ರಹ್ಮಾರ ಕೊಕ್ಕರ್ಣೆಯ ಅಕ್ಷೇಂದ್ರ(34), ಅಜಿತ್(28), ಕೊಕ್ಕರ್ಣೆ ಬೆನಗಲ್ ನಿವಾಸಿ ಪ್ರದೀಪ್ ಆಚಾರ್ಯ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಅಕ್ಷೇಂದ್ರಗೆ ಜೀವನ್ ಎಂಬಾತ ಬೈದಿರುವ ಆಡಿಯೋವನ್ನು ವಿನಯ್ ದೇವಾಡಿಗ ವಾಟ್ಸಪ್ ಮೂಲಕ ಬೇರೆಯವರಿಗೆ ಹಂಚಿಕೊಂಡಿದ್ದನಂತೆ. ಇದು ವೈರಲ್ ಆಗಿದೆ. ಇದೇ ಕಾರಣಕ್ಕೆ ಕಳೆದ ರಾತ್ರಿ ಮನೆಗೆ ನುಗ್ಗಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಉಡುಪಿ ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.