ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಈ ಬಾರಿಯ ದಸರಾ ಉದ್ಘಾಟನೆಯನ್ನು ಲೇಖಕಿ ಬಾನು ಮುಷ್ತಾಕ್ ಅವರು ಮಾಡಲಿದ್ದಾರೆ. ಮೈಸೂರು ಜಿಲ್ಲಾಡಳಿತ ಅವರಿಗೆ ಆಹ್ವಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನೆ ಎತ್ತಿದ್ದು, ಇಸ್ಲಾಂನಲ್ಲಿ ಮೂರ್ತಿ ಪೂಜೆ ವಿರೋಧಿಸಿ ಒಬ್ಬ ದೇವರು, ಒಂದು ಧರ್ಮಗ್ರಂಥ ಎನ್ನಲಾಗುತ್ತೆ. ಈ ನಂಬಿಕೆಯಲ್ಲಿ ಅವರು ಇನ್ನೂ ಇದ್ದಾರೆಯೇ ಅಥವ ಎಲ್ಲ ಮಾರ್ಗಗಳು ಮೋಕ್ಷಕ್ಕೆ ದಾರಿ ಮಾಡಿಕೊಡುತ್ತೇವೆ ಎಂದು ಹೇಳುತ್ತಾರೆಯೇ ಎಂದು ಸ್ಪಷ್ಟಪಡಿಸಬೇಕಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಬೇಕು. ದೀಪ ಬೆಳಗಿಸಿ ಉದ್ಘಾಟನೆ ಮಾಡಬೇಕು. ಇದು ಅವರ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ. ಲೇಖಕಿಯಾಗಿ, ಹೋರಾಟಗಾರ್ತಿಯಾಗಿ ಬಾನು ಮುಷ್ತಾಕ್ ಅವರನ್ನು ನಾನು ಗೌರವಿಸುತ್ತೇನೆ. ಆದರೆ, ಈ ಸ್ಪಷ್ಟತೆ ಇಲ್ಲದೆ ಅವರು ದಸರಾ ಉದ್ಘಾಟಿಸುವುದು ಸರಿಯಲ್ಲ. ಸಾಂಸ್ಕೃತಿಕ ಅಥವ ಕವಿಗೋಷ್ಠಿತಹ ಕಾರ್ಯಕ್ರಮಗಳನ್ನು ಉದ್ಘಾಟಿಸುವುದು ತಕ್ಕದಾಗಿದೆ ಎಂದಿದ್ದಾರೆ.