ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಮೈಸೂರು ದಸರಾ ಉದ್ಘಾಟನೆ ಸಂಬಂಧ ಲೇಖಕಿ ಬಾನು ಮುಷ್ತಾಕ್ ವಿರುದ್ಧ ಮಾತುಗಳು ಕೇಳಿ ಬಂದಿವೆ. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಅಪಸ್ವರ ತೆಗೆದಿದ್ದು, ಪೂಜೆ ಪುನಸ್ಕಾರಗಳ ಬಗ್ಗೆ ನಂಬಿಕೆ ಇಲ್ಲದವರು ಯಾಕೆ ಮೈಸೂರು ದಸರಾ ಉದ್ಘಾಟನೆ ಮಾಡಬೇಕು ಎಂದಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಲೇಖಕಿ ಬಾನು ಮುಷ್ತಾಕ್, ಹಿಂದೆ ನಾನು ಏನು ಮಾತನಾಡಿದ್ದೇನೆ ಅನ್ನೋದನ್ನು ತಿಳಿದುಕೊಂಡು ಮಾತನಾಡಲಿ. ಈ ಬಗ್ಗೆ ಸೂಕ್ತ ಸಮಯದಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ.
ವಿರೋಧ ಮಾಡುವವರ ಮಾಡಲಿ. ಅವರಿಗೂ ಸ್ವಾತಂತ್ರ್ಯವಿದೆ. ಅದಕ್ಕೆ ನಾನು ಈಗ ಪ್ರತಿಕ್ರಿಯೆ ನೀಡಲ್ಲ. ಸೂಕ್ತ ವೇದಿಕೆಯಲ್ಲಿ ಸಮಕ್ಷಮದಲ್ಲಿ ಮಾತನಾಡುತ್ತೇನೆ ಎನ್ನುವ ಮೂಲಕ ತಿರುಗೇಟು ನೀಡಿದ್ದಾರೆ. ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತರಾಗಿರುವ ಬಾನು ಮುಷ್ತಾಕ್ ಅವರನ್ನು ಸರ್ಕಾರ ಘೋಷಿಸಿದೆ. ಮೈಸೂರು ಜಿಲ್ಲಾಡಳಿತದಿಂದ ಅಧಿಕೃತವಾಗಿ ಆಹ್ವಾನ ನೀಡಬೇಕಿದೆ.