ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಕುಂದಾನಗರಿ ಜಿಲ್ಲೆಯಾದ್ಯಂತ ಭರ್ಜರಿ ಮಳೆಯಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಹೀಗಾಗಿ ಕೆಲವು ಕಡೆ ಅನಾಹುತಗಳು ನಡೆಯುತ್ತಿವೆ. ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋದ ಆಟೋ ಚಾಲಕ ನೀರಲ್ಲಿ ಕೊಚ್ಚಿಕೊಂಡು ಹೋದ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿ ಚಿಕ್ಕಬೂದೂರು ಗ್ರಾಮದಲ್ಲಿ ನಡೆದಿದೆ.
ವಿಚಾರ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಮುರುಗೋಡ ಠಾಣೆ ಪೊಲೀಸರು ಬಂದಿದ್ದಾರೆ. ಆಟೋ ಚಾಲಕನ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಆತ ಯಾರು, ಎಲ್ಲಿಂದ ಎಲ್ಲಿಗೆ ಹೊರಟಿದ್ದ ಅನ್ನೋದರ ಮಾಹಿತಿ ತಿಳಿದು ಬರಬೇಕಿದೆ.