ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ವಿಚಾರವಾಗಿ ಆದಿಚುಂಚನಗಿರಿ ಕ್ಷೇತ್ರದ ಬೆಂಗಳೂರಿನ ವಿಜಯನಗರ ಶಾಖಾ ಮಠದಲ್ಲಿ ಶನಿವಾರ ಒಕ್ಕಲಿಗರ ಸಮುದಾಯದ ಜಾಗೃತಿ ಸಭೆ ನಡೆಸಲಾಯಿತು. ಪಕ್ಷಭೇದ ಮರೆತು ಡಿಸಿಎಂ ಡಿ.ಕೆ ಶಿವಕುಮಾರ್, ಕೇಂದ್ರ ಸಚಿವ ಹೆಚ್.ಡಿ ಕುಮಾರ್ ಜೊತೆಯಾಗಿ ಕಾಣಿಸಿಕೊಂಡರು. ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಜಾಗೃತಿ ಸಭೆ ನಡೆಸಲಾಯಿತು.
ರಾಜಕೀಯವಾಗಿ ಬೇರೆ ಬೇರೆ ಪಕ್ಷದಲ್ಲಿದ್ದರೂ ಸಮಾಜದ ಹಿನ್ನಲೆಯಲ್ಲಿ ಸಚಿವ ಎಂ.ಸಿ ಸುಧಾಕರ್, ಸಂಸದ ಕೆ.ಸುಧಾಕರ್, ಮಾಜಿ ಸಿಎಂ ಡಿ.ವಿ ಸದಾನಂದಗೌಡ, ಸಿ.ಟಿ ರವಿ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಸಭೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ವಿಚಾರವಾಗಿ ಸಮುದಾಯದ ನಾಯಕರು, ಮುಖಂಡರು, ಒಕ್ಕಲಿಗ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಲಾಯಿತು.