ಪ್ರಜಾಸ್ತ್ರ ಸುದ್ದಿ
ಶಹಾಪುರ(Shapur): ಭಜರಂಗದಳ ಕಾರ್ಯಕರ್ತರ ಮೇಲೆ ಸುಖಾಸುಮ್ಮನೆ ಗೂಂಡಾ ಕಾಯ್ದೆ ಹಾಕಿ ಗಡಿಪಾರು ಮಾಡಲಾಗುತ್ತಿದೆ ಎಂದು ಆರೋಪಿಸಿ ಶಹಾಪುರ ಪೊಲೀಸ್ ಠಾಣೆ ಮುಂದೆ ಶನಿವಾರ ರಾತ್ರಿ ಪ್ರತಿಭಟನೆ ನಡೆಸಲಾಗಿದೆ. ಭಜರಂಗದಳ ಕಾರ್ಯಕರ್ತರು, ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಧರಣಿ ನಡೆಸಿದರು. ಈ ವೇಳೆ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪಾಂಗುಳಿ ಗಲ್ಲಿಯಲ್ಲಿರುವ ಅಶ್ವತ್ಥಾಮ ಮಂದಿರದ ಮೇಲೆ ಕಲ್ಲು ತೂರಾಟ ನಡೆಸಿದವರನ್ನು ಬಂಧಿಸುವಂತೆ ಇತ್ತೀಚೆಗೆ ಪೊಲೀಸರಿಗೆ ಮನವಿ ಕೊಟ್ಟಿದ್ದೇವೆ. ಆ ಸಿಟಿಯಿಂದ ಈ ರೀತಿ ವಿನಾಕಾರಣ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ. ಭಜರಂಗದಳ ಕಾರ್ಯಕರ್ತರಾದ ಶ್ರೀರಾಮ ಪೋಟೆ, ಮನೋಜ ಹಲಗೇಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಕೂಡಲೇ ಇದೆಲ್ಲವು ನಿಲ್ಲಬೇಕು. ದೇಶ, ಧರ್ಮದ ಪರ ಕೆಲಸ ಮಾಡುವವರ ಮೇಲೆ ಕ್ರಮ ತೆಗೆದುಕೊಳ್ಳುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.