ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಇಸ್ಲಾಂ ಪ್ರಕಾರ ಮೂರ್ತಿ ಪೂಜೆ ಮಾಡುವವರು ಕಾಫೀರರು. ಅವರನ್ನು ಕೊಲ್ಲಿ ಎಂದು ಹೇಳುತ್ತದೆ. ಹೀಗಿರುವಾಗ ಬಾನು ಮುಷ್ತಾಕ್ ಚಾಮುಂಡೇಶ್ವರಿ ಪೂಜೆ ಮಾಡಲು ಮುಂದಾಗಿದ್ದಾರೆ. ಇಸ್ಲಾಂ ಬಗ್ಗೆ ನನಗೆ ನಂಬಿಕೆಯಿಲ್ಲ ಎಂದು ಅವರು ಹೇಳಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ. ಶುಕ್ರವಾರ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಮೂರ್ತಿ ಪೂಜೆಗೆ ಬರುತ್ತಿರುವ ಬಾನು ಮುಷ್ತಾಕ್ ವಿರುದ್ಧ ಏನು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಮೌಲ್ವಿಗಳು ಹೇಳಬೇಕು. ಇಲ್ಲ ನಾನು ಈಗ ಇಸ್ಲಾಂ ಧರ್ಮದಲ್ಲಿ ಇಲ್ಲವೆಂದು ಹೇಳಲಿ ಅಥವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡಲಿ. ಹೀಗಾಗಿ ದಸರಾ ಉದ್ಘಾಟನೆಯಿಂದ ಹಿಂದೆ ಸರಿಯಲಿ ಎಂದರು.