Ad imageAd image

ವಚನಗಳಿಂದ ವಿಶ್ವಕ್ಕೆ ಸಂದೇಶ ನೀಡಿದ ಬಸವಣ್ಣ: ಸಚಿವ ಎಂ.ಬಿ ಪಾಟೀಲ

Nagesh Talawar
ವಚನಗಳಿಂದ ವಿಶ್ವಕ್ಕೆ ಸಂದೇಶ ನೀಡಿದ ಬಸವಣ್ಣ: ಸಚಿವ ಎಂ.ಬಿ ಪಾಟೀಲ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಬಸವ ಜಯಂತಿ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ಅವರು ಸೋಮವಾರ ಬೆಳಿಗ್ಗೆ ಇಲ್ಲಿನ ಬಸವೇಶ್ವರ ವೃತ್ತದಲ್ಲಿರುವ ವಿಶ್ವಗುರು ಬಸವೇಶ್ಚರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ  ಮಾತನಾಡಿದ ಸಚಿವರು, ವಿಶ್ವ ಗುರು ಬಸವಣ್ಣನವರು ಜನಿಸಿದ ವಿಜಯಪುರ ಜಿಲ್ಲೆಯಲ್ಲಿ ಬಸವಣ್ಣನವರ ಜಯಂತಿಯನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಬಸವನಬಾಗೇವಾಡಿಯಿಂದ ಬಸವಜ್ಯೋತಿ ಯಾತ್ರೆಯೂ ಆಗಮಿಸುತ್ತಿದೆ. ಇಡೀ ವಿಶ್ವಕ್ಕೆ  ತಮ್ಮ ವಚನಗಳ ಮೂಲಕ ಉತ್ತಮ ಸಂದೇಶ ನೀಡಿದ ಬಸವಣ್ಣನವರು ಶ್ರೇಷ್ಠ ದಾರ್ಶನಿಕರು. ಅವರಿಗೆ ಜನ್ಮನೀಡಿದ ಹಾಗೂ  ಅವರ ಕರ್ಮಭೂಮಿ ಬಸವಕಲ್ಯಾಣ ಸೇರಿದಂತೆ ಎಲ್ಲೆಡೆಯೂ ವಿಜೃಂಭಣೆಯಿಂದ ಅವರ ಜಯಂತಿ ಆಚರಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರು, ಸಾರ್ವಜನಿಕರು  ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article