ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ನಗರದ ಪರಪ್ಪನ ಅಗ್ರಹಾರದಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಜೈಲು ಆವರಣದ ಕಾಂಪೌಂಡ್ ಬಳಿ ಕರಡಿ ಕಾಣಿಸಿಕೊಂಡಿದೆ. ಮೊಬೈಲ್ ನಲ್ಲಿ ದೃಶ್ಯ ಸೆರೆ ಹಿಡಿಯಲಾಗಿದೆ. ಅಧಿಕಾರಿಗಳು ಸಹ ಆತಂಕಗೊಂಡಿದ್ದು, ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.