ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಮಾರಕಾಸ್ತ್ರಗಳಿಂದ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿಯಲ್ಲಿ ನಡೆದಿದೆ. 50 ವರ್ಷದ ಕಲ್ಮೇಶ್ ಕೋಟಿ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಗ್ರಾಮದ ಮೆಕ್ಕೆಜೋಳ ಹೊಲವೊಂದರಲ್ಲಿ ಮೃತದೇಹ ಪತ್ತೆಯಾಗಿದೆ. ತುಮಕೂರಿನ ಹೋಂ ಕೇರ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಲ್ಮೇಶ್ 10 ದಿನಗಳ ಹಿಂದೆಯಷ್ಟೆ ಊರಿಗೆ ಬಂದಿದ್ದ.
ಇತನ ಪತ್ನಿ ಹಾಗೂ ಮಗ 10 ವರ್ಷಗಳ ಹಿಂದೆ ಇವನನ್ನು ಬಿಟ್ಟು ಹೋಗಿದ್ದರಂತೆ. ಗ್ರಾಮದಲ್ಲಿದ್ದ ತಾಯಿಯೊಂದಿಗೆ ವಾಸವಾಗಿದ್ದ. ಯಾವ ವಿಚಾರಕ್ಕೆ ಕೊಲೆ ಮಾಡಲಾಗಿದೆ. ಇದರ ಹಿಂದೆ ಯಾರಿದ್ದಾರೆ ಅನ್ನೋ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.




