ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಕಿತ್ತೂರು ಪಟ್ಟಣ ಪಂಚಾಯ್ತಿ ಚುನಾವಣೆ(Election) ಹಿನ್ನಲೆಯಲ್ಲಿ ಬಿಜೆಪಿ ಸದಸ್ಯನ ಅಪಹರಣ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿ ಎಂಬುವರನ್ನು ಗುರುವಾರ ರಾತ್ರಿ ಅಪಹರಣ ಮಾಡಲಾಗಿದೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನಲೆಯಲ್ಲಿ ಈ ಘಟನೆ ಎನ್ನುವ ಸಂಶಯ ಮೂಡಿದೆ. ಸೆಪ್ಟೆಂಬರ್ 3ರಂದು ಕಿತ್ತೂರು(Kittoru) ಪಟ್ಟಣ ಪಂಚಾಯ್ತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆಯಲಿದೆ.
ಇಲ್ಲಿನ ಪಟ್ಟಣ ಪಂಚಾಯ್ತಿಯಲ್ಲಿ ಬಿಜೆಪಿಯ 9 ಸದಸ್ಯರಿದ್ದಾರೆ. ಕಾಂಗ್ರೆಸ್ ಹಾಗೂ ಪಕ್ಷೇತರರು ಸೇರಿ 9 ಸದಸ್ಯರಿದ್ದಾರೆ. ಹೀಗಾಗಿ ಕಾಂಗ್ರೆಸ್ ನವರೆ ಅಪಹರಿಸಿದ್ದಾರೆ(kidnap)ಎನ್ನುವುದು ಬಿಜೆಪಿಯವರ ಆರೋಪ. ಸದಸ್ಯನ ತಂದೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇನ್ನು ತಡರಾತ್ರಿ ಕಿತ್ತೂರು ಪೊಲೀಸ್ ಠಾಣೆ ಎದುರು ಬಿಜೆಪಿಯವರು ಪ್ರತಿಭಟನೆ ನಡೆಸಿರು. ಅಪಹರಣಕ್ಕೊಳಗಾದ ಸದಸ್ಯನ ಪತ್ತೆಗಾಗಿ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ ಗುಳೇದ ಹೇಳಿದ್ದಾರೆ.