ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಶಿವಸೇನೆ(ಉದ್ಧವ್ ಠಾಕ್ರೆ ಬಣ) ಯುವ ನಾಯಕ ಆದಿತ್ಯ ಠಾಕ್ರೆ, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಕೇಂದ್ರ ಸರ್ಕಾರ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮಾಧ್ಯಮದವರು ಪ್ರತಿಕ್ರಿಯೆ ಕೇಳಿದಾಗ, ಬೆಳಗಾವಿ ಕೇಂದ್ರಾಡಳಿತ ಮಾಡಬೇಕು ಎನ್ನುವುದೇ ಅಪ್ರಸ್ತುತ. ಮಹಾಜನ್ ಆಯೋಗದ ವರದಿಯ ಅಂತಿಮ. ಪದೆಪದೆ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ ಎಂದು ವಾಗ್ದಾಳಿ ನಡೆಸಿದರು.
ಈ ಬಗ್ಗೆ ನೀಡುವ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸಿಲ್ಲ. ಇದೆಲ್ಲ ಬಾಲಿಶವಾದ ಹೇಳಿಕೆ. ಇನ್ನು ಪಂಚಮಸಾಲಿ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದರೂ ಬಂದಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡಲು ಅವಕಾಶವಿದೆ. ಅದಕ್ಕೆ ನಮ್ಮ ವಿರೋಧವಿಲ್ಲ ಎಂದು ಹೇಳಿದ್ದಾರೆ. ಆದರೆ, ಇತ್ತ ಪಂಚಮಸಾಲಿ ಸಮಾಜದ ಹೋರಾಟ ಹಿಂಸಾಸ್ವರೂಪ ಪಡೆದುಕೊಂಡಿದೆ. ಪೊಲೀಸರ ಲಾಠಿ ಚಾರ್ಜ್ ನಿಂದ ಹಲವರು ಗಾಯಗೊಂಡಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಾಟ, ಚಪ್ಪಲಿ ಎಸೆತದಿಂದ ಕೆಲ ಸಿಬ್ಬಂದಿಯೂ ಗಾಯಗೊಂಡಿದ್ದಾರೆ.