Ad imageAd image

ಬಳ್ಳಾರಿ: ಪಿಎಸ್ಐ ಪತ್ನಿ ಆತ್ಮಹತ್ಯೆ

Nagesh Talawar
ಬಳ್ಳಾರಿ: ಪಿಎಸ್ಐ ಪತ್ನಿ ಆತ್ಮಹತ್ಯೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬಳ್ಳಾರಿ(Ballari): ಪಿಎಸ್ಐ ಪತ್ನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮೋಕಾದಲ್ಲಿ ನಡೆದಿದೆ. ಮೋಕಾ ಪೊಲೀಸ್ ಠಾಣೆಯ ಪಿಎಸ್ಐ ಕೆ.ಕಾಳಿಂಗ ಅವರ ಪತ್ನಿ ಚೈತ್ರಾ(36) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡ ಹಾಗೂ ಮಕ್ಕಳನ್ನು ಧ್ವಜಾರೋಹಣಕ್ಕೆ ಕಳಿಸಿದ ಮೇಲೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬದಲ್ಲಿ ನೀರವಮೌನ ಆವರಿಸಿಕೊಂಡಿದೆ.

ಕಳೆದ ಎರಡು ವರ್ಷಗಳ ಅವಧಿಯಲ್ಲಿ ಇಬ್ಬರು ಸಹೋದರಿಯರು, ಓರ್ವ ಸಹೋದರ ಮೃತಪಟ್ಟಿದ್ದು, ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಶಿವಮೊಗ್ಗದಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಗುರುವಾರ ಸಂಜೆಯಷ್ಟೇ ತವರು ಮನೆಯಾದ ಮಲಪನಗುಡಿಯಿಂದ ಮೋಕಾಗೆ ಬಂದಿದ್ದರು. ಮುಂಜಾನೆ ಗಂಡ, ಮಕ್ಕಳು ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಭಾಗವಹಿಸಲು ಹೋಗಿದ್ದರು. ಇತ್ತ ಇವರು ನೇಣಿಗೆ ಶರಣಾಗಿದ್ದಾರೆ.

WhatsApp Group Join Now
Telegram Group Join Now
Share This Article