ಪ್ರಜಾಸ್ತ್ರ ಸುದ್ದಿ
ಚೆನ್ನೈ(Chennai): ಬಾಂಗ್ಲಾದೇಶ ವಿರುದ್ಧದ 2 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ಮೊದಲ ಪಂದ್ಯವನ್ನು 280 ರನ್ ಗಳ ಅಂತರದಿಂದ ಜಯ ಸಾಧಿಸಿದೆ. ಟೀಂ ಇಂಡಿಯಾ 515 ರನ್ ಟಾರ್ಗೆಟ್ ನೀಡಿತ್ತು. ಬಿಗ್ ಸ್ಕೋರ್ ಚೇಸ್ ಮಾಡಿದ ಬಾಂಗ್ಲಾ ಪಡೆ 234 ರನ್ ಗಳಿಗೆ ಆಲೌಟ್ ಆಗಿದೆ. ಇದರಿಂದಾಗಿ 4ನೇ ದಿನದಾಟದ ಮೊದಲ ಅವಧಿಯಲ್ಲಿಯೇ ರೋಹಿತ್ ಶರ್ಮಾ ಬಳಗ ಗೆಲುವು ದಾಖಲಿಸಿದೆ. ಬ್ಯಾಟಿಂಗ್ ನಲ್ಲಿ ಸಖತ್ ಮಿಂಚಿದ್ದ ಹಿರಿಯ ಅನುಭವಿ ಆಟಗಾರ ರವಿಚಂದ್ರನ್ ಅಶ್ವಿನ್ ಬೌಲಿಂಗ್ ನಲ್ಲಿಯೂ ಕಮಾಲ್ ಮಾಡಿ 6 ವಿಕೆಟ್ ಪಡೆದರು.
ಮೊದಲ ಇನ್ನಿಂಗ್ಸ್ ನಲ್ಲಿ 149 ರನ್ ಗಳಿಗೆ ಆಲೌಟ್ ಆಗಿದ್ದ ಬಾಂಗ್ಲಾ ಟೀಂ 2ನೇ ಇನ್ನಿಂಗ್ಸ್ ನಲ್ಲಿ ಸ್ವಲ್ಪ ಪ್ರತಿರೋಧ ತೋರಿದರೂ ಗೆಲುವಿನ ಸಮೀಪವಾಗಲಿ, ಡ್ರಾ ಮಾಡಿಕೊಳ್ಳುವ ಹಂತಕ್ಕೆ ತೆಗೆದುಕೊಂಡು ಹೋಗಲು ಆಗಲಿಲ್ಲ. ಅಶ್ವಿನ್ 6 ವಿಕೆಟ್ ಪಡೆದರೆ, ಜಡೇಜಾ 3 ವಿಕೆಟ್ ಪಡೆದರು. ಮೊದಲ ಇನ್ನಿಂಗ್ಸ್ ನಲ್ಲಿ 113 ರನ್, 2ನೇ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ಪಡೆದ ಅಶ್ವಿನ್ ಪ್ಲೇಯರ್ ಆಫ್ ದಿ ಮ್ಯಾಚ್ ಆದರು. ಬಾಂಗ್ಲಾ ಪರ ನಾಯಕ ಸ್ಯಾಂಟೋ 82 ರನ್, ಶದ್ಮಾನ್ ಇಸ್ಲಾಂ 35, ಝಾಕಿರ್ ಹಸನ್ 33 ರನ್ ಗಳಿಸಿದ್ದು ಗರಿಷ್ಠ ಸ್ಕೋರ್ ಆಗಿದೆ.