ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕೆ.ಆರ್ ಮಾರುಕಟ್ಟೆಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ತಮಿಳುನಾಡು ಮೂಲದ ಮಹಿಳೆಯನ್ನು ಜನವರಿ 19ರ ರಾತ್ರಿ 11.30ರ ಸುಮಾರಿಗೆ ಸಾಮೂಹಿಕ ಅತ್ಯಾಚಾರವೆಸಗಿ, ಚಿನ್ನದ ತಾಳಿ, ಓಲೆ, ಬೆಳ್ಳಿ ಕಾಲು ಚೈನು, ಮೊಬೈಲ್, 650 ರೂಪಾಯಿ ನಗದು ದೋಚಿಕೊಂಡು ಹೋಗಿದ್ದ ಇಬ್ಬರನ್ನು ಬಂಧಿಸಲಾಗಿದೆ. ಶರವಣ(35), ಗಣೇಶ(23) ಕೃತ್ಯವೆಸಗಿದ ನೀಚರು. ಕೇಂದ್ರ ವಿಭಾಗದ ಮಹಿಳಾ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಬ್ಬರ ವಿರುದ್ಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳಿವೆ.
ಸಿಸಿಟಿವಿ ದೃಶ್ಯಾವಳಿ ಹಾಗೂ ಕೆಲ ಟೆಕ್ನಿಕಲ್ ಸಾಕ್ಷಿಗಳ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಕೋರ್ಟಿಗೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಕುಟುಂಬದಿಂದ ದೂರುವಾಗಿರುವ ಇವರು ಕೆ.ಆರ್ ಮಾರುಕಟ್ಟೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದಾರೆ. ಇದರ ನಡುವೆ ಕೆಲ ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ.