ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನಗರದ ದೊಡ್ಡ ತೇಗೂರು ಹತ್ತಿರದ ಪ್ರಗತಿ ನಗರದಲ್ಲಿ ಕಳೆದ ರಾತ್ರಿ ನಡೆದುಕೊಂಡು ಹೋಗುತ್ತಿದ್ದ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪತಿ ಕೊಲೆ ಮಾಡಿದ್ದಾನೆ. ಬಾಗೇಪಲ್ಲಿ ಮೂಲದ ಶಾರದಾ(35) ಕೊಲೆಯಾದ ದುರ್ದೈವಿ. ಆಂಧ್ರ ಮೂಲದ ಪತಿ ಕೃಷ್ಣಪ್ಪ(43) ಕೊಲೆ ಆರೋಪಿಯಾಗಿದ್ದಾನೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.
ಹತ್ಯೆಯಾದ ಶಾರದಾ ಮನೆ ಕೆಲಸ ಮಾಡುತ್ತಿದ್ದಳು. ಆರೋಪಿ ಕೃಷ್ಣಪ್ಪ ಕೂಲಿ ಕೆಲಸ ಮಾಡುತ್ತಿದ್ದ. ನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಈ ಕಾರಣಕ್ಕೆ ಪತಿ, ಪತ್ನಿ ಇತ್ತೀಚೆಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಮಗ ಪತಿ ಹತ್ತಿರ, ಮಗಳು ಪತ್ನಿ ಹತ್ತಿರ ಇದ್ದರು. ಪತ್ನಿ ಬೇರೊಬ್ಬನ ಜೊತೆಗೆ ಸ್ನೇಹ ಬೆಳೆಸಿದ್ದಳು ಎಂದು ಗಲಾಟೆ ಮಾಡುತ್ತಿದ್ದನಂತೆ. ಶುಕ್ರವಾರ ರಾತ್ರಿ ಕೊಲೆ ಮಾಡಿ ಪರಾರಿಯಾಗುತ್ತಿದ್ದವನನ್ನು ಸ್ಥಳೀಯರು ಹಿಡಿದಿದ್ದಾರೆ. ಎಲೆಕ್ಟ್ರಾನ್ ಸಿಟಿ ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.